2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಇಂದು ಬೆಳಗ್ಗೆ 10.30ಕ್ಕೆ ಪ್ರಕಟವಾಗಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಿದೆ. ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಎನ್. ಮಂಜುಶ್ರೀ ಈ ಬಗ್ಗೆ ಈಗಾಗಲೇ ಮಾಹಿತಿ ನೀಡಿದ್ದಾರೆ. ಈ ಬಾರಿ 441910 ವಿದ್ಯಾರ್ಥಿಗಳು, 428058 ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದರು.
ಮಾರ್ಚ್ ಹಾಗೂ ಏಪ್ರಿಲ್ನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ನಡೆದಿದ್ದವು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿರುತ್ತದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ಮೇ 9ರಂದು ಬೆಳಗ್ಗೆ 10.30ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಲ್ಲೇಶ್ವರಂನಲ್ಲಿ ಸುದ್ದಿಗೋಷ್ಠಿ ಕರೆದಿದೆ. 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ 10.30ರ ನಂತರ ವೀಕ್ಷಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಿತ್ತು.
ಫಲಿತಾಂಶ ನೋಡುವುದು, ಡೌನ್ಲೋಡ್ ಮಾಡುವುದು ಹೇಗೆ?
ಅಧಿಕೃತ ವೆಬ್ಸೈಟ್ karresults.nic.in ಗೆ ಭೇಟಿ ನೀಡಿ
ಮುಖಪುಟದಲ್ಲಿ SSLC Results 2024 ಲಿಂಕ್ ಅನ್ನು ಕ್ಲಿಕ್ ಮಾಡಿ
ಹೊಸ ಲಾಗಿನ್ ಪುಟವು ತೆರೆಯುತ್ತದೆ
ನಿಮ್ಮ ಅಪ್ಲಿಕೇಶನ್ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ
ಆಗ ಫಲಿತಾಂಶ ಕಾಣಿಸಿಕೊಳ್ಳುತ್ತದೆ, ಅಲ್ಲಿ ಡೌನ್ಲೋಡ್ ಮಾಡಿ