ಹಾಸನ: ಕಾಲೇಜಿನ ಐದನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮೂಲತಃ ಚನ್ನರಾಯಪಟ್ಟಣ ತಾಲೂಕಿನ ದಂಡಿಗನಹಳ್ಳಿ ಹೋಬಳಿ, ಹೊನ್ನಶೆಟ್ಟಿಹಳ್ಳಿಯ ಮಾನ್ಯ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ಹಾಸನ ಹೊರವಲಯದ ಕಾಲೇಜುವೊಂದರಲ್ಲಿ ಪ್ರಥಮ ವರ್ಷದ ಎಲೆಕ್ಟ್ರಾನಿಕ್ ಆ್ಯಂಡ್ ಕಮ್ಯೂನಿಕೇಷನ್ ಎಂಜಿನಿಯರಿಂಗ್ ಪದವಿ ಓದುತ್ತಿದ್ದಳು.
ಇಂದು ಮೊದಲ ಪರೀಕ್ಷೆ ಬರೆದಿದ್ದು, ಪರೀಕ್ಷೆ ಸಮಯದಲ್ಲಿ ನಕಲು ಮಾಡಿದ್ದಾಗಿ ಆರೋಪಿಸಿ ಕಾಲೇಜು ಪ್ರಾಂಶುಪಾಲರಿಗೆ ಕ್ಷಮಾಪಣೆ ಪತ್ರ ಬರೆದುಕೊಡುವಂತೆ ಉಪನ್ಯಾಸಕರೊಬ್ಬರು ಹೇಳಿದ್ದರು.
ಇದಾದ ಬಳಿಕ ವಿದ್ಯಾರ್ಥಿನಿ ಕಾಲೇಜಿನ ಐದನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.