ಸುಳ್ಯ: ದೀಪಾವಳಿ ಸಂಭ್ರಮದಲ್ಲಿರುವಾಗಲೇ ಮಾಜಿ ಗ್ರಾಮ ಪಂಚಾಯತ್ ಸದಸ್ಯ ತಲವರ್ ಷಣ್ಮುಗಂ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಸಂಪಾಜೆಯಲ್ಲಿ ನಡೆದಿದೆ.
ತಲವರ್ ಷಣ್ಮುಗಂ ಸಂಪಾಜೆ ಗ್ರಾಮ ಪಂಚಾಯತ್ 1ನೇ ವಾರ್ಡ್ ನಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದರು. ಕುಟುಂಬದೊಂದಿಗೆ ದೀಪಾವಳಿ ಸಂಭ್ರಮದಲ್ಲಿರುವಾಗಲೇ ಕುಸಿದು ಬಿದ್ದಿದ್ದಾರೆ.
ತಕ್ಷಣ ಅವರನ್ನು ಆಸ್ಪತ್ರೆ ಸೇರಿಸುವ ಸಮಯದಲ್ಲಿ ಮೃತಪಟ್ಟಿದ್ದಾಗಿ ತಿಳಿದು ಬಂದಿದೆ. ಮೃತರಿಗೆ 62 ವರ್ಷ ಆಗಿತ್ತು. ಪತ್ನಿ, ಮೂವರು ಹೆಣ್ಣು ಮಕ್ಕಳು, ಓರ್ವ ಗಂಡು ಮಗನನ್ನು ಅಗಲಿದ್ದಾರೆಂದು ತಿಳಿದು ಬಂದಿದೆ.
ಇನ್ನು ಶನಿವಾರ ಸಂಜೆ ಸಂಪಾಜೆಯ ಕಲ್ಲುಗುಂಡಿಯಲ್ಲಿ ಟೈಲರ್ ಆಗಿದ್ದ ಅಬಿರ ನಾಗೇಶ್ ಅನ್ನುವ ವ್ಯಕ್ತಿಯೊಬ್ಬರು ಕೂಡ ದಿಢೀರ್ ಹೃದಯಾಘಾತದಿಂದ ಸಾವಿಗೀಡಾಗಿದ್ದರು.