ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಚಿನ್ನದ ಪದಕ ಗೆಲ್ಲುವಲ್ಲಿ ಸುಮಿತ್ ಅಂಟಿಲ್ (Sumith Antil) ಮತ್ತೊಮ್ಮೆ ಯಶಸ್ವಿಯಾಗಿದ್ದಾರೆ. ಟೋಕಿಯೊ ಪ್ಯಾರಾಲಿಂಪಿಕ್ಸ್‌ನ ಜಾವೆಲಿನ್‌ನಲ್ಲಿ ಭಾರತಕ್ಕೆ ಚಿನ್ನದ ಪದಕ ಗೆದ್ದು ಕೊಟ್ಟಿದ್ದ ಸುಮಿತ್ ಈ ಬಾರಿ ದಾಖಲೆಯೊಂದಿಗೆ ಬಂಗಾರದ ಪದಕಕ್ಕೆ ಕೊರೊಳೊಡ್ಡಿದ್ದಾರೆ.
ಜಾವೆಲಿನ್ ಥ್ರೋ F64 ಫೈನಲ್ ಸ್ಪರ್ಧೆಯಲ್ಲಿ 70.59 ಮೀಟರ್ ದೂರಕ್ಕೆ ಜಾವೆಲಿನ್ ಎಸೆಯುವ ಮೂಲಕ ಭಾರತೀಯ ತಾರೆ ಚಿನ್ನದ ಪದಕ ಗೆದ್ದಿದ್ದಾರೆ.
ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನಲ್ಲಿ ಸುಮಿತ್ ಆಂಟಿಲ್ ಚಿನ್ನದ ಪದಕವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಈ ವರ್ಷ ನಡೆದ ಪ್ಯಾರಾ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ 69.50 ಮೀಟರ್ ಜಾವೆಲಿನ್ ಎಸೆದು ಚಿನ್ನ ಗೆದ್ದಿದ್ದರು. ಹಾಗೆಯೇ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಅವರು 68.55 ಮೀಟರ್ ದೂರ ಎಸೆದು ಚಿನ್ನದ ಪದಕವನ್ನು ಗೆದ್ದಿದ್ದರು. ಇದೀಗ ಈ ದಾಖಲೆಗಳನ್ನು ಮುರಿಯುವ ಮೂಲಕ 70.59 ಮೀಟರ್ನೊಂದಿಗೆ ಸುಮಿತ್ ಆಂಟಿಲ್ ಹೊಸ ಇತಿಹಾಸ ನಿರ್ಮಿಸಿದ್ದಾರೆ.