ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕಿ ವಿದ್ಯಾರ್ಥಿಯ ಜೊತೆ ರೊಮ್ಯಾಂಟಿಕ್ ಫೋಟೊ ಶೂಟ್ ಮಾಡಿಸಿಕೊಂಡಿದ್ದು ಈ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮುರುಗಮಲ್ಲ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಮಕ್ಕಳನ್ನು ಶೈಕ್ಷಣಿಕ ಪ್ರವಾಸಕ್ಕೆ ಕರೆದುಕೊಂಡು ಹೋಗಲಾಗಿತ್ತು.
ಮಕ್ಕಳಿಗೆ ಪ್ರವಾಸದ ವೇಳೆ ಉತ್ತಮ ವಿಚಾರಗಳನ್ನು ತಿಳಿಸುವುದನ್ನು ಬಿಟ್ಟು ಮುಖ್ಯ ಶಿಕ್ಷಕಿ ಪುಷ್ಪಲತಾ ಹೈಸ್ಕೂಲ್ ವಿದ್ಯಾರ್ಥಿಯ ಜೊತೆ ರೊಮ್ಯಾಂಟಿಕ್ ಪೋಸ್‌ಗಳಲ್ಲಿ ಫೋಟೊ ಶೂಟ್ ಮಾಡಿಸಿಕೊಂಡಿದ್ದಾರೆ. ಸೀರೆ ಸೆರಗು ಎಳೆಯುವುದು, ಕೆನ್ನೆಗೆ ಮುತ್ತು ಕೊಡಿಸಿಕೊಳ್ಳುವುದು ಹೀಗೆ ವಿವಿಧ ರೀತಿಯ ಫೋಟೊಸ್‌ಗಳನ್ನು ತೆಗೆಸಿಕೊಂಡಿದ್ದಾರೆ.
ಈ ಫೋಟೊಗಳು ಪೋಷಕರ ಆಕ್ರೋಶಕ್ಕೆ ಕಾರಣವಾಗಿದ್ದು ಶಿಕ್ಷಕಿಗೆ ಹಿಗ್ಗಾಮುಗ್ಗಾ ಕ್ಸಾಸ್ ತೆಗೆದುಕೊಂಡಿದ್ದಾರೆ. ಶಿಕ್ಷಕಿ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತೆ ಆಗ್ರಹಿಸಿದ್ದಾರೆ . ಪೋಷಕರು ಶಿಕ್ಷಣಾಧಿಕಾರಿ ಗಮನಕ್ಕೆ ಈ ವಿಚಾರ ತಂದಿದ್ದು ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ.