Monday, December 9, 2024

ಸೆ. 11ರಿ‌ಂದ ರಾಜ್ಯಾದ್ಯಂತ ಪೌರಕಾರ್ಮಿಕರ ಮುಷ್ಕರ: ಸರ್ಕಾರದ ಮೇಲೆ ಆಕ್ರೋಶ

ಗುತ್ತಿಗೆ ಪೌರಕಾರ್ಮಿಕರು ಸೇವೆ ಕಾಯಂಗೆ ಒತ್ತಾಯಿಸಿ ಸೆಪ್ಟೆಂಬರ್ 11ರಿಂದ ರಾಜ್ಯಾದ್ಯಂತ ಮುಷ್ಕರ ನಡೆಸಲು ಮುಂದಾಗಿದ್ದಾರೆ. ಇದರಿಂದಾಗಿ ಸ್ವಚ್ಛತಾ ಕಾರ್ಯಗಳು ಸ್ಥಗಿತಗೊಳ್ಳುವ ಸಾಧ್ಯತೆ ಇದೆ.

ಹಿಂದಿನ ಸರ್ಕಾರದ ಅವಧಿಯಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ 18 ಸಾವಿರಕ್ಕೂ ಹೆಚ್ಚು ಪೌರಕಾರ್ಮಿಕರನ್ನು ಕಾಯಂ ಮಾಡುವ ಬಗ್ಗೆ ಅಧಿಸೂಚನೆ ಹೊರಡಿಸಲಾಗಿತ್ತು.

ಬಿಬಿಎಂಪಿ ವ್ಯಾಪ್ತಿಯಲ್ಲಿ 14,000 ಗುತ್ತಿಗೆ ಪೌರ ಕಾರ್ಮಿಕರನ್ನು ಕಾಯಂಗೊಳಿಸುವುದಾಗಿ ಹೇಳಲಾಗಿತ್ತು. 3000ಕ್ಕೂ ಹೆಚ್ಚು ಪೌರಕಾರ್ಮಿಕರ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಆದರೆ, ನೂತನ ಸರ್ಕಾರ ರಚನೆಯಾಗಿ 100 ದಿನ ಪೂರ್ಣಗೊಂಡರೂ, ಪೌರಕಾರ್ಮಿಕರ ಕಾಯಂಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 11 ರಿಂದ ಗುತ್ತಿಗೆ ಪೌರಕಾರ್ಮಿಕರು ರಾಜ್ಯಾದ್ಯಂತ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ.

Related Articles

Latest Articles