Monday, October 14, 2024

ಮೂಡಬಿದಿರೆ: ಬಾವಿಗೆ ಬಿದ್ದ ಚಿರತೆ: ರಕ್ಷಣಾ ಕಾರ್ಯ ಯಶಸ್ವಿ

ಮೂಡುಬಿದಿರೆ ಪುರಸಭಾ ವ್ಯಾಪ್ತಿಯ ಮಾರೂರಿನ ಎಸ್ ಸಿ ಕಾಲನಿಯಲ್ಲಿ ಆಕಸ್ಮಿಕವಾಗಿ ಬಾವಿಗೆ ಬಿದ್ದ ಚಿರತೆಯನ್ನು ಊರವರ ಸಹಕಾರದೊಂದಿಗೆ ಅರಣ್ಯಾಧಿಕಾರಿಗಳು ರಕ್ಷಿಸಿದ್ದಾರೆ.

ಬಾವಿಯೊಂದಕ್ಕೆ ದೊಡ್ಡ ಗಾತ್ರದ ಚಿರತೆಯೊಂದು ಸೋಮವಾರ ಬೆಳಗ್ಗಿನ ವೇಳೆ ಆಯತಪ್ಪಿ ಬಿದ್ದಿದೆ.

ಈ ಬಗ್ಗೆ ಗ್ರಾಮಸ್ಥರು ಅರಣ್ಯಾಧಿಕಾರಿಗಳಿಗೆ ಮತ್ತು ಪೊಲೀಸರಿಗೆ ಮಾಹಿತಿ ನೀಡಿದರು. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸತೀಶ್ ಎನ್. ಅವರ ಮಾರ್ಗದರ್ಶನದೊಂದಿಗೆ ವಲಯಾರಣ್ಯಾಧಿಕಾರಿ ಹೇಮಗಿರಿ ಅಂಗಡಿ ನೇತೃತ್ವದ ಸಿಬಂದಿಗಳ ತಂಡವು ತಕ್ಷಣ ಸ್ಥಳಕ್ಕಾಗಮಿಸಿದ ಕಾರ್ಯಪ್ರವೃತರಾಗಿ ಬಾವಿಗೆ ಬಲೆ ಹಾಕಿ ಬೋನು ಇಟ್ಟು ಅದರೊಳಗೆ ಚಿರತೆ ಬರುವಂತೆ ಮಾಡಲಾಗಿತ್ತು.

ಬೋನಿನ ಒಳಗೆ ಬಂದ ಚಿರತೆಯನ್ನು ಮೇಲಕ್ಕೆತ್ತಿ ಪ್ರಥಮ ಚಿಕಿತ್ಸೆ ನೀಡಿ ರಕ್ಷಿಸಲಾಗಿದೆ.

Related Articles

Latest Articles