Monday, December 9, 2024

ಆಸ್ಕರ್ ಲೈಬ್ರೆರಿ ಸೇರಲಿದೆ ದಿ ವ್ಯಾಕ್ಸಿನ್ ವಾರ್..!

ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ದಿ ವ್ಯಾಕ್ಸಿನ್ ವಾರ್ ಸಿನಿಮಾದ ಸ್ಕ್ರಿಪ್ಟ್ ಶೀಘ್ರದಲ್ಲೇ ಆಸ್ಕರ್ ಲೈಬ್ರೆರಿಯ ಸಂಗ್ರಹ ಸೇರಲಿದೆ. ದಿ ಕಾಶ್ಮೀರಿ ಫೈಲ್ಸ್ ಸಿನಿಮಾ ಖ್ಯಾತಿಯ ನಿರ್ದೇಶಕ ವಿವೇಕ್ ರಂಜನ್ ಅಗ್ನಿಹೋತ್ರಿ ಅವರ ಹೊಸ ಚಲನಚಿತ್ರ ದಿ ವ್ಯಾಕ್ಸಿನ್ ವಾರ್ ಸೆಪ್ಟೆಂಬರ್ 28ರಂದು ತೆರೆ ಕಂಡಿದೆ. ಚಿತ್ರ ಅಷ್ಟರ ಮಟ್ಟಿಗೆ ಉತ್ತಮ ಪ್ರದರ್ಶನ ಕಾಣದಿದ್ದರೂ, ಪ್ರೇಕ್ಷಕರಿಂದ ಪಾಸಿಟಿವ್ ರೆಸ್ಪಾನ್ಸ್ ಸಿಕ್ಕಿದೆ.

ಶೀಘ್ರದಲ್ಲೇ ದಿ ವ್ಯಾಕ್ಸಿನ್ ವಾರ್ ಸ್ಕ್ರಿಪ್ಟ್ ಆಸ್ಕರ್ ಲೈಬ್ರೆರಿಯ ಸಂಗ್ರಹದಲ್ಲಿ ಸೇರಲಿದೆ. ಅಕಾಡೆಮಿಯಿಂದ ಸ್ವೀಕರಿಸಿದ ಮೇಲ್‌ನ ಸ್ಕ್ರೀನ್‌ಶಾಟ್ ಅನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಅಗ್ನಿಹೋತ್ರಿ ಸಂತಸ ವ್ಯಕ್ತಪಡಿಸಿದ್ದಾರೆ.

ನಿಜ ಕಥೆಯಾಧಾರಿತ ದಿ ವ್ಯಾಕ್ಸಿನ್ ವಾರ್’ ಚಿತ್ರದ ಸ್ಕ್ರಿಪ್ಟ್ ಅನ್ನು ಆಸ್ಕರ್ ಲೈಬ್ರೆರಿಯು ತನ್ನ ಅಕಾಡೆಮಿಯ ಸಂಗ್ರಹದಲ್ಲಿ ಸೇರಿಸಲು ಆಹ್ವಾನಿಸಿದೆ ಎಂದು ಹೇಳಿಕೊಳ್ಳಲು ಹೆಮ್ಮೆಯಾಗುತ್ತಿದೆ. ನೂರಾರು ವರ್ಷಗಳ ನಂತರವೂ ಜನರು ಭಾರತೀಯ ಸೂಪರ್ ಹೀರೋಗಳ ಈ ಮಹಾನ್ ಕಥೆಯನ್ನು ಓದುತ್ತಾರೆ ಎನ್ನುವುದೇ ಸಂತಸದ ವಿಚಾರ” ಎಂದು ವಿವೇಕ್ ಅಗ್ನಿಹೋತ್ರಿ ಬರೆದುಕೊಂಡಿದ್ದಾರೆ.

https://x.com/vivekagnihotri/status/1712310102328532993?s=20

‘ದಿ ವ್ಯಾಕ್ಸಿನ್ ವಾರ್’ ಸಿನಿಮಾ ಕಥೆಯು, ಕೋವಿಡ್ 19 ನಿಯಂತ್ರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಲಸಿಕೆಯ ಅಭಿವೃದ್ಧಿಯಲ್ಲಿ ವಿಜ್ಞಾನಿಗಳು ಎದುರಿಸಿದ ಸವಾಲುಗಳ ಮೇಲೆ ಕೇಂದ್ರೀಕೃತವಾಗಿದೆ. ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಟ ನಡೆಸಿದ ಎಲ್ಲರಿಗೂ ಗೌರವ ಸಲ್ಲಿಸುವ ಪ್ರಯತ್ನವನ್ನು ಸಿನಿಮಾದಲ್ಲಿ ಮಾಡಲಾಗಿದೆ.

ಚಿತ್ರದಲ್ಲಿ ನಾನಾ ಪಾಟೇಕರ್, ಪಲ್ಲವಿ ಜೋಶಿ, ರೈಮಾ ಸೇನ್, ಅನುಪಮ್ ಖೇರ್, ಗಿರಿಜಾ ಓಕ್, ನಿವೇದಿತಾ ಭಟ್ಟಾಚಾರ್ಯ, ಸಪ್ತಮಿ ಗೌಡ, ಮೋಹನ್ ಕಪೂರ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ವೈದ್ಯಕೀಯ ಕ್ಷೇತ್ರಕ್ಕೆ ಗೌರವ ಸಲ್ಲಿಸುವ ಸಲುವಾಗಿ ಈ ಸಿನಿಮಾ ನಿರ್ಮಾಣಗೊಂಡಿದೆ.

Related Articles

Latest Articles