ತ್ರಿಶೂರ್: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಆರೋಪಿಗೆ 20 ವರ್ಷ ಕಠಿಣ ಸಜೆ ಮತ್ತು 25000 ದಂಡ ವಿಧಿಸಿ ಆದೇಶ ಹೊರಡಿಸಿದೆ. ಅಡೂರಿನ ನಿವಾಸಿ ರಾಕೇಶ್ (31) ಅಪರಾಧಿ ಎಂದು ವಡಕಂಚೇರಿ ತ್ವರಿತ ವಿಶೇಷ ಪೋಕ್ಸೋ ನ್ಯಾಯಾಲಯ ತೀರ್ಪು ನೀಡಿದೆ.
ಆಗಸ್ಟ್ 2020 ರಲ್ಲಿ 12 ವರ್ಷದ ವಿದ್ಯಾರ್ಥಿಯನ್ನು ನಿರ್ಜನ ಗದ್ದೆಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ಬಗ್ಗೆ ದೂರು ದಾಖಲಾಗಿದ್ದು ಅಪರಾಧ ಸಾಬೀತಾಗಿ ಶಿಕ್ಷೆ ಪ್ರಕಟವಾಗಿದೆ. ದಂಡದ ಮೊತ್ತವನ್ನು ವಿದ್ಯಾರ್ಥಿಗೆ ಪಾವತಿಸುವಂತೆ ನ್ಯಾಯಾಲಯ ಸೂಚಿಸಿದೆ.