ಬಿಗ್ ಬಾಸ್ ಸ್ಪರ್ಧಿ ತುಕಾಲಿ ಸಂತೋಷ್ ಅವರ ಕಾರು ಅಪಘಾತಕ್ಕೀಡಾಗಿದೆ. ಕುಣಿಗಲ್ ತಾಲೂಕಿನ ಹೊನ್ನೇನಹಳ್ಳಿ ಬಳಿ ಕಾರಿಗೆ ಆಟೋವೊಂದು ಡಿಕ್ಕಿಯಾಗಿದ್ದು, ಆಟೋ ಚಾಲಕನಿಗೆ ಗಾಯಗಳಾಗಿವೆ. ಹೊಸ ಕಾರು ಮನೆಗೆ ಬಂದು 2 ವಾರ ಕಳೆಯುವುದರೊಳಗೆ ಅಪಘಾತ ಸಂಭವಿಸಿದೆ.
ತುಮಕೂರಿನಿಂದ ಕುಣಿಗಲ್ ಮಾರ್ಗವಾಗಿ ಹೊಳೆನರಸೀಪುರ ಕಡೆ ಹೋಗುತ್ತಿದ್ದಾಗ ಕಾರಿಗೆ ಕುಣಿಗಲ್‌ನಿಂದ ಕುರುಡಿಹಳ್ಳಿಗೆ ಬರುತ್ತಿದ್ದ ಆಟೋ ಡಿಕ್ಕಿಯಾಗಿದೆ. ಅಪಘಾತದಲ್ಲಿ ಆಟೋ ಭಾಗಶಃ ಜಖಂಗೊಂಡಿದ್ದು, ಆಟೋ ಚಾಲಕ ಜಗದೀಶ್ ಎಂಬುವವರಿಗೆ ಗಾಯಗಳಾಗಿವೆ. ಗಾಯಾಳುವನ್ನು ಕುಣಿಗಲ್ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಟೋ ಚಾಲಕ ಜಗದೀಶ್ ಮದ್ಯ ಸೇವಿಸಿದ್ದ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ. ಅಪಘಾತದ ಬಗ್ಗೆ ತುಕಾಲಿ ಸಂತೋಷ್ ಅವರು ಇನ್ನಷ್ಟೇ ಪ್ರತಿಕ್ರಿಯೆ ನೀಡಬೇಕಿದೆ. ಕಾರು ಅಪಘಾತದ ಸುದ್ದಿಯಿಂದ ಅವರ ಅಭಿಮಾನಿಗಳಿಗೆ ಬೇಸರ ಆಗಿದೆ.