Sunday, April 20, 2025

ದಂಪತಿ ನೇಣುಬಿಗಿದುಕೊಂಡು ಆತ್ಮಹತ್ಯೆ: ಅನಾಥವಾಯ್ತು ಎರಡು ವರ್ಷದ ಮಗು

ತುಮಕೂರು: ಒಂದೇ ಶಾಲಿಗೆ‌ ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ, ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ರೊಪ್ಪ ಗ್ರಾಮದಲ್ಲಿ ನಡೆದಿದೆ.

ಮನು (26) ಪವಿತ್ರ (24) ಆತ್ಮಹತ್ಯೆಗೆ ಶರಣಾದ ದಂಪಿ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ರೊಪ್ಪ ಗ್ರಾಮದಲ್ಲಿ ತಾವು ವಾಸವಿದ್ದ ಮನೆಯಲ್ಲಿಯೇ ದಂಪತಿ ನೇಣಿಗೆ ಕೊರಳೊಡ್ಡಿದ್ದಾರೆ.

ಮೂರು ವರ್ಷದ ಹಿಂದೆ ದಾಂಪತ್ಯಕ್ಕೆ ಕಾಲಿಟ್ಟಿದ್ದರು. ಪಾವಗಡ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ದಂಪತಿಗೆ ಎರಡು ವರ್ಷದ ಮಗಳಿದ್ದು, ಮನು ತಾಯಿ ಮನೆ ಬಾಗಿಲು ತೆಗೆದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಪಾವಗಡ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Articles

Latest Articles