ತುಮಕೂರು: ಜಮೀನಿಗೆ ದಾರಿ ಬಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ತುಮಕೂರು ತಾಲೂಕಿನ ಕಟ್ಟೆಗೊಲ್ಲಹಳ್ಳಿಯಲ್ಲಿ ನಡೆದಿದೆ. ಎರಡು ಕುಟುಂಬಗಳ ನಡುವಿನ ಕಾದಾಟದಲ್ಲಿ ಮಹಿಳೆಯರು ಪರಸ್ಪರ ಜುಟ್ಟು ಹಿಡಿದು ಬಡಿದಾಡಿಕೊಂಡಿದ್ದಾರೆ.
ಆಸ್ತಿ ವಿಚಾರದಲ್ಲಿ ದಾಯಾದಿಗಳ ನಡುವೆ ಗಲಾಟೆ ನಡೆದಿದೆ. ರವೀಶ್ ಕುಟುಂಬದ ಅವರ ಪತ್ನಿ ರುದ್ರಾಣಮ್ಮ ಮಗ ರೋಹಿತ್ ನಿಂದ ಹಲ್ಲೆ ಆರೋಪ ಮಾಡಲಾಗಿದೆ.
ನಾಗರಾಜಯ್ಯ ಕುಟುಂಬದ ಮೇಲೆ ರವೀಶ್ ಕುಟುಂಬದವರಿಂದ ಹಲ್ಲೆ ಮಾಡಿದ್ದಾರೆ. 16 ಎಕರೆ ಆಸ್ತಿ ಪ್ರಕರಣ ಕೋರ್ಟ್ ನಲ್ಲಿ ವಿಚಾರಣೆ ನಡುವೆಯೂ ಗಲಾಟೆ ನಡೆದಿದೆ. ಈ ಸಂಬಂಧ ಹೆಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.