ಉತ್ತರಾಖಂಡ: ನಿರ್ಮಾಣ ಹಂತದಲ್ಲಿದ್ದ ರಸ್ತೆ ಸುರಂಗದೊಳಗೆ ಸಿಕ್ಕಿಬಿದ್ದ ಎಲ್ಲಾ 41 ಕಾರ್ಮಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಿದ ರಕ್ಷಣಾ ಕಾರ್ಯಾಚರಣೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಶ್ಲಾಘಿಸಿದ್ದಾರೆ.
ನರೇಂದ್ರ ಮೋದಿ ಅವರು, ರಕ್ಷಿಸಿದ ಕಾರ್ಮಿಕರೊಂದಿಗೆ ದೂರವಾಣಿಯಲ್ಲಿ ಮಾತನಾಡಿ, ಅವರ ಯೋಗಕ್ಷೇಮದ ಬಗ್ಗೆ ವಿಚಾರಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಎಲ್ಲಾ 41 ಕಾರ್ಮಿಕರನ್ನು ಪ್ರಾಥಮಿಕ ವೈದ್ಯಕೀಯ ಚಿಕಿತ್ಸೆಗಾಗಿ ಚಿನ್ಯಾಲಿಸೌರ್ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತರಲಾಗಿದೆ.
ಇನ್ನು ಸುರಕ್ಷಿತವಾಗಿ ಸ್ಥಳಾಂತರಿಸುವ ಬಗ್ಗೆ ಪ್ರತಿಕ್ರಿಯಿಸಿದ ಪ್ರಧಾನಿ ತಮ್ಮ ಅಧಿಕೃತ ಎಕ್ಸ್ ಹ್ಯಾಂಡಲ್ನಲ್ಲಿ ಈ ಕಾರ್ಯಾಚರಣೆಯು ಎಲ್ಲರನ್ನೂ ಭಾವುಕರನ್ನಾಗಿಸಿದೆ ಮತ್ತು ಕಳೆದ 16 ದಿನಗಳಿಂದ ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗದೊಳಗೆ ಸಿಕ್ಕಿಬಿದ್ದ ಕಾರ್ಮಿಕರಿಗೆ ಇದು ಹೊಸ ಜೀವನವನ್ನು ನೀಡಿದೆ ಎಂದು ಹೇಳಿಕೊಂಡಿದ್ದಾರೆ.