Saturday, November 9, 2024

ಆಸ್ತಿ ವಿಚಾರವಾಗಿ ಎರಡು ಕುಟುಂಬಗಳ ಮಧ್ಯೆ ಮಾರಾಮಾರಿ

ಬೆಳಗಾವಿ: ಆಸ್ತಿ ವಿಚಾರದ ಕುರಿತು ಎರಡು ಕುಟುಂಬಗಳ ಮಧ್ಯೆ ಮಾರಾಮಾರಿ ನಡೆದಿದೆ. ಕಟ್ಟಿಗೆ, ಕುಡುಗೋಲಿನಿಂದ ಬಡಿದಾಡಿಕೊಂಡ ಘಟನೆ ತಾಲೂಕಿನ ಕಾಕತಿ ಗ್ರಾಮದ ಜಮೀನಿನಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯವಾಗಿದೆ.

ಐದು ಜನರಿಗೆ ಸಣ್ಣಪುಟ್ಟ ಗಾಯವಾಗಿದೆ. ಕೂಡಲೇ ‌ಸ್ಥಳೀಯರ ನೆರವಿನಿಂದ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗೂಂಡಾಗಳನ್ನು ಕರೆಯಿಸಿ ಕೃಷಿಯಲ್ಲಿ ತೊಡಗಿದ್ದ ಕಾಕತಿ ನಿವಾಸಿ ಅನಿಲ್ ಮುಂಗಾರಿ ಕುಟುಂಬಸ್ಥರ ಮೇಲೆ ಹಲ್ಲೆ ಮಾಡಲಾಗಿದೆ.

ಇದೀಗ ಘಟನೆಗೆ ಅದೇ ಗ್ರಾಮದ ಸಿದ್ದರಾಯಿ ತುಂಬರಿ ಎಂಬುವವರು ಕಾರಣವೆಂದು ಆರೋಪಿಸಿದ್ದಾರೆ. ಅನಿಲ್ ಮುಂಗಾರಿಗೆ ಸೇರಿದ ಜಮೀನು ಕಬ್ಜಾ ಮಾಡಲು ಸಿದ್ದರಾಯಿ ತುಂಬರಿ ಪ್ಲ್ಯಾನ್ ಮಾಡಿತ್ತು. ಕೋರ್ಟ್‌ನಲ್ಲಿರುವ ಜಮೀನು ಬಿಟ್ಟುಕೊಡುವಂತೆ ಸಿದ್ದರಾಯಿ ತುಂಬರಿ ಬೇಡಿಕೆ ಇಟ್ಟಿದ್ದರು. ಇದಕ್ಕೆ ಒಪ್ಪದಾಗ ಅನಿಲ್ ಮುಂಗಾರಿ ಕುಟುಂಬಸ್ಥರ ಮೇಲೆ ಗೂಂಡಾಗಳನ್ನು ಕರೆಯಿಸಿ ಹಲ್ಲೆ ಮಾಡಿದ್ದಾರೆ ಎಂದು ಅನಿಲ್ ಮುಂಗಾರಿ ಕುಟುಂಬಸ್ಥರ ಆರೋಪಿಸಿದ್ದಾರೆ.

ಈ ಘಟನೆ ಬೆಳಗಾವಿಯ ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇನ್ನು ಎರಡು ಗುಂಪುಗಳ ಮಧ್ಯೆ ನಡೆದ ಮಾರಾಮಾರಿ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದೆ.

Related Articles

Latest Articles