ಉಡುಪಿ: ರಾಜ್ಯದ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ನದಿಗಳು ಉಕ್ಕಿ ಹರಿಯುತ್ತಿದೆ. ಅಲ್ಲಲ್ಲಿ ಪ್ರವಾಹ,ಕೃತಕ ನೆರೆ ಆವರಿಸಿದೆ. ಈ ಹಿನ್ನಲೆ ಮುಂಜಾಗೃತ ಕ್ರಮವಾಗಿ ಉಡುಪಿ ಜಿಲ್ಲೆಗೆ ಆ. ೨ ರಂದು ಅಂಗನವಾಡಿ, ಶಾಲೆ, ಪಿಯುಸಿಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಉಡುಪಿ ಜಿಲ್ಲಾಧಿಕಾರಿ ಆ. ೨ ರಂದು ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ, ಪಿಯುಸಿಗಳಿಗೆ ರಜೆ ಘೋಷಿಸಿದ್ದಾರೆ. ಆದರೆ ಡಿಗ್ರಿ, ಇಂಜಿನಿಯರ್, ಡಿಪ್ಲೊಮಾ ಸೇರಿದಂತೆ ವಿವಿಧ ಸಂಸ್ಥೆಗಳಿಗೆ ರಜೆ ನಿಗದಿಯಾಗಿಲ್ಲ.