Wednesday, November 6, 2024

ಮಂಗಳೂರಿನ ಖಾಸಗಿ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

ಉಡುಪಿ: ಮಣಿಪಾಲದ ಹೆರ್ಗದಲ್ಲಿ ವಿದ್ಯಾರ್ಥಿನಿಯೊರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಚಿಕ್ಕಮಗಳೂರು ಕೊಪ್ಪ ತಾಲೂಕಿನ ಹರಂದೂರು ಗ್ರಾಮದ ಶ್ರೀನಿಧಿ ಶೆಟ್ಟಿ (20) ಆತ್ಮಹತ್ಯೆ ಮಾಡಿಕೊಂಡವರು.

ಈ ಯುವತಿ ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಸಿಎ ವ್ಯಾಸಂಗ ಮಾಡುತ್ತಿದ್ದರು. ಇತ್ತೀಚೆಗೆ ಡಯಾಲಿಸಿಸ್ ಹಿನ್ನಲೆಯಲ್ಲಿ ಮೃತಳ ತಂದೆಯಾದ ಕೊಪ್ಪ ಹರಂದೂರು ಗ್ರಾಮದ ಮಹೇಶ್ ಎನ್ನುವವರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಇನ್ನು ಹೆರ್ಗ ಗ್ರಾಮದಲ್ಲಿ ಬಾಡಿಗೆ ಮನೆ ಮಾಡಿಕೊಂಡು ಪತ್ನಿ ಹಾಗೂ ಮಗಳೊಂದಿಗೆ ಮಹೇಶ್ ವಾಸವಾಗಿದ್ದರು. ಬಾಡಿಗೆ ಮನೆಯ ರೂಮ್​ನಲ್ಲಿ ಯಾರು ಇಲ್ಲದ ವೇಳೆ ಶ್ರೀನಿಧಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಇನ್ನೂ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮಾಡುತ್ತಿದ್ದಾರೆ.

Related Articles

Latest Articles