Monday, September 16, 2024

ಮಂಗಳೂರು: ಹಲವು ಪ್ರಕರಣಗಳ ಆರೋಪಿಯ ಭೀಕರ ಕೊಲೆ

ಉಳ್ಳಾಲ: ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿ ಕಡಪ್ಪರ ಸಮೀರ್ ಎಂಬಾತನನ್ನು ಉಳ್ಳಾಲದ ತೊಕ್ಕೊಟ್ಟು ಸಮೀಪದ ಕಲ್ಲಾಪು ಬಳಿ ತಂಡವೊಂದು ಬರ್ಬರವಾಗಿ ಹತ್ಯೆ ಮಾಡಿದೆ.

ಸಮೀರ್ ರವಿವಾರ ರಾತ್ರಿ ತನ್ನ ಕುಟುಂಬದೊಂದಿಗೆ ಕಲ್ಲಾಪು ಬಳಿಯ ಫಾಸ್ಟ್ ಫುಡ್ ಅಂಗಡಿಯೊಂದಕ್ಕೆ ಬಂದಿದ್ದಾನೆ. ಈ ವೇಳೆ ಕೊಲೆಗಾಗಿ ಹೊಂಚು ಹಾಕಿದ್ದ ದುಷ್ಕರ್ಮಿಗಳ ತಂಡ ಈತನ ವಾಹನವನ್ನೇ ಹಿಂಬಾಲಿಸಿಕೊಂಡು ಬಂದು ಕೊಲೆ ಕೃತ್ಯವೆಸಗಿರುವುದು ತಿಳಿದುಬಂದಿರುತ್ತದೆ. ಘಟನೆಯ ಬಳಿಕ ತಂಡ ಪರಾರಿಯಾಗಿದೆ.

ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿದ್ದಾರೆ. ಸುಮಾರು 3-4 ಮಂದಿ ಅಪರಿಚಿತ ದುಷ್ಕರ್ಮಿಗಳು ತಲವಾರು, ಮಾರಕಾಯುಧಗಳಿಂದ ಹಲ್ಲೆ ನಡೆಸಿ ಸಮೀರ್ ನನ್ನು ಕೊಲೆ ಮಾಡಿರುವ ಬಗ್ಗೆ ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.

Related Articles

Latest Articles