Monday, December 9, 2024

ಉಪ್ಪಳ: ಮಂಗಳೂರಲ್ಲಿ ವಿದ್ಯಾಭ್ಯಾಸ ‌ಮಾಡುತ್ತಿದ್ದ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ

ವಿಷ ಸೇವನೆಯಿಂದ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದ್ದ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಉಪ್ಪಳದಲ್ಲಿ ನಡೆದಿದೆ.

ಉಪ್ಪಳ ಐಲ ಕುದುಪುಳು ವಿನ ಸುರೇಶ್ ರವರ ಪುತ್ರಿ ಧನ್ಯಶ್ರೀ ( 19) ಮೃತಪಟ್ಟವರು. ಮಂಗಳೂರು ಖಾಸಗಿ ಕಾಲೇಜಿನ ದ್ವಿತೀಯ ವರ್ಷದ ಪದವಿ ವಿದ್ಯಾರ್ಥಿನಿಯಾಗಿದ್ದಳು.

ಹನ್ನೆರಡು ದಿನಗಳ ಹಿಂದೆ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕೊಂಡೊಯ್ದು ತಪಾಸಣೆ ನಡೆಸಿದಾಗ ವಿಷ ಸೇವನೆ ಮಾಡಿರುವ ಬಗ್ಗೆ ತಿಳಿದುಬಂದಿತ್ತು .

ಗಂಭೀರ ಸ್ಥಿತಿಗೆ ತಲಪಿದ್ದ ಧನ್ಯಶ್ರೀಳನ್ನು ಕೊಚ್ಚಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆಗೆ ಸ್ಪಂದಿಸದ ಹಿನ್ನಲೆಯಲ್ಲಿ ವೈದ್ಯರ ಸಲಹೆಯಂತೆ ಕಾಸರಗೋಡಿಗೆ ಕರೆದುಕೊಂಡು ಬಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಪೊಲೀಸರು ಮಹಜರು ನಡೆಸಿ ಮೃತದೇಹ ವನ್ನು ಸಂಬಂಧಿಕರಿಗೆ ಬಿಟ್ಟುಕೊಡಲಾಗಿದೆ.
ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Related Articles

Latest Articles