Friday, June 27, 2025

ವಿದ್ಯಾರ್ಥಿನಿಯರಿಗೆ ಮರ್ಮಾಂಗ ತೋರಿಸಿ ಎಸ್ಕೇಪ್ ಆಗುತ್ತಿದ್ದ ಕಾಮುಕ ಅರೆಸ್ಟ್

ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಬಂದು ಮರ್ಮಾಂಗವನ್ನು ತೊರಿಸಿ ಎಸ್ಕೇಪ್ ಆಗುತ್ತಿದ್ದ ವಿಕೃತ ಕಾಮುಕನನ್ನು ವಿವಿಪುರಂ ಪೊಲೀಸರು ಬಂಧಿಸಿದ್ದಾರೆ. ಯಶಸ್ವಿಯಾಗಿದ್ದಾರೆ. ಅಯೂಬ್ ಉರ್ ರೆಹಮಾನ್(48) ಬಂಧಿತ ವಿಕೃತ ಕಾಮಿ.

ಈತ ಯುವತಿಯರು ಹೆಚ್ಚಾಗಿರುವ ಕಾಲೇಜು ಟಾರ್ಗೆಟ್ ಮಾಡಿ ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಬಂದು ಯುವತಿಯರಿಗೆ ಮರ್ಮಾಂಗ ತೋರಿಸಿ ಪರಾರಿಯಾಗುತ್ತಿದ್ದ. ಹೀಗೆ ಮಾಡಿ ಎಸ್ಕೇಪ್ ಆಗುತ್ತಿದ್ದವನನ್ನು ಇಂದು (ಜುಲೈ 08) ವಿವಿಪುರಂ ಪೊಲೀಸರು ಬಂಧಿಸಿದ್ದಾರೆ.

ಬೈಕ್​ನಲ್ಲಿ ಬರುವ ಕಾಮುಕ ಉರ್ ರೆಹಮಾನ್, ವಿ.ವಿ. ಪುರಂ ರಸ್ತೆಯಲ್ಲಿ ಓಡಾಡುವ ವಿದ್ಯಾರ್ಥಿನಿಯರಿಗೆ ತನ್ನ ಖಾಸಗಿ ಅಂಗ ಪ್ರದರ್ಶಿಸಿ ಕಿರುಕುಳ ನೀಡುತ್ತಿದ್ದ. ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಬಂದು ಯುವತಿಯರಿರುವ ಕಡೆ ಬೈಕ್ ನಿಲ್ಲಿಸಿ ಮರ್ಮಾಂಗ ತೋರಿಸಿ ಎಸ್ಕೇಪ್ ಆಗುತ್ತಿದ್ದ.

ಇದರಿಂದ ವಿದ್ಯಾರ್ಥಿನಿಯರಿಗೆ ಸಾಕಾಗಿ ಹೋಗಿತ್ತು. ಕೊನೆಗೆ ಕೆಲ ವಿದ್ಯಾರ್ಥಿನಿಯರು ಕಾಮುಕನ ಕೃತ್ಯವನ್ನು ಮೊಬೈಲ್​ನಲ್ಲಿ ಸೆರೆ ಹಿಡಿದು ವಿ.ವಿ.ಪುರಂ ಪೊಲೀಸರಿಗೆ ದೂರು ನೀಡಿ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದರು.

ವಿಡಿಯೋ ಸಹ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ಕಾಮುಕನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿ ಅಯೂಬ್, ಕಲಾಸಿಪಾಳ್ಯದಲ್ಲಿ ಟೀ ಅಂಗಡಿ ನಡೆಸುತ್ತಿದ್ದ ಎಂದು ತಿಳಿದುಬಂದಿದೆ.

Related Articles

Latest Articles