ವಿಜಯಪುರ: ವಸತಿಯುತ ಶಾಲಾ ಮುಂಭಾಗದಲ್ಲಿ 10ನೇ ತರಗತಿ ವಿದ್ಯಾರ್ಥಿನಿಗೆ ಯುವಕನೊಬ್ಬ ತಾಳಿಕಟ್ಟಿ, ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೃತ್ಯದಲ್ಲಿ ಭಾಗಿಯಾದವರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಲಾಗಿದೆ.
ಘಟನೆ ವಿವರ: ಮುದ್ದೇಬಿಹಾಳ ತಾಲೂಕಿನ ವಸತಿ ಶಾಲೆಯ ಮುಂಭಾಗದಲ್ಲಿ ನ.24 ರಂದು ಈ ಘಟನೆ ನಡೆದಿದೆ. ಆರೋಪಿಗಳಾದ ನಾಲತವಾಡ ಪಟ್ಟಣದ ಮೌನೇಶ ಹನುಮಂತ ಮಾದರ ಹಾಗೂ ಸಂಗಮೇಶ ಬಡಪ್ಪ ಜುಂಜುವಾರ ವಿರುದ್ಧ ಪೋಕ್ಸೋ ಹಾಗೂ ಬಾಲ್ಯವಿವಾಹ ನಿಷೇಧ ಕಾಯ್ದೆ ಅನ್ವಯ ನ.28ರಂದು ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಬಾಲಕಿ ಪ್ರಕರಣ ದಾಖಲಿಸಿದ್ದಾಳೆ.
ಘಟನೆಗೆ ಸಂಬಂಧಿಸಿದಂತೆ ವಸತಿ ಶಾಲೆಗೆ ಅಧಿಕಾರಿಗಳು ಭೇಟಿ ನೀಡಿದ್ದು ಮಾಹಿತಿ ಕಲೆ ಹಾಕಿದ್ದಾರೆ.