Tuesday, April 22, 2025

ಮಹಾರಾಷ್ಟ್ರಕ್ಕೆ ಕರೆದುಕೊಂಡು ಹೋಗಿ ಅಪ್ರಾಪ್ತೆ ಮೇಲೆ ದೌರ್ಜನ್ಯ; ಅನ್ಯಕೋಮಿನ ಯುವಕ ಅರೆಸ್ಟ್

ವಿಜಯಪುರ: ಅನ್ಯಕೋಮಿನ ಯುವಕನೊಬ್ಬ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಜಿಲ್ಲೆಯ ಇಂಡಿ ತಾಲ್ಲೂಕಿನ ಚಿಕ್ಕಬೇವನೂರ ಗ್ರಾಮದಲ್ಲಿ ಘಟನೆ ನಡೆದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಸುಹೇಲ್ ಹೊನಮುರಗಿ ಎಂದು ಗುರುತಿಸಲಾಗಿದೆ.

ಅಪ್ರಾಪ್ತೆಯನ್ನು ಪುಸಲಾಯಿಸಿ ಮಹಾರಾಷ್ಟ್ರಕ್ಕೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಇದೇ ತಿಂಗಳ ಮೇ 13ರಂದು ಅಪ್ರಾಪ್ತೆಯನ್ನ ಮಹಾರಾಷ್ಟ್ರಕ್ಕೆ ಕರೆದುಕೊಂಡು ಹೋಗಿದ್ದಾನೆ. ಮೇ 17ರಂದು ಆಕೆಯನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾನೆ. ಮಗಳು ನಾಲ್ಕು ದಿನಗಳಿಂದ ಮನೆಗೆ ಬಾರದಿದ್ದನ್ನು ಕಂಡು ಪೋಷಕರು ಇಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪೋಷಕರು ನೀಡಿದ ದೂರಿನ ಮೇರೆಗೆ ಕೇಸ್‌ ದಾಖಲಿಸಿಕೊಂಡು ತನಿಖೆ ನಡೆಸಿದ್ದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಸೋಹೇಲ್ ವಿರುದ್ಧ ಕಲಂ 366, 376(2) (IPC), ಮತ್ತು ಐಪಿಸಿ ಸೆಕ್ಷನ್‌ 4, 6, 12, ಪೋಕ್ಸೋ ಕಾಯ್ದೆ 2012 ಅಡಿಯಲ್ಲಿ ಕೇಸ್ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Related Articles

Latest Articles