Friday, March 21, 2025

ಪ್ಯಾರಿಸ್ ಒಲಿಂಪಿಕ್‌ನಲ್ಲಿ ಸಂಚಲನ ಸೃಷ್ಟಿಸಿದ್ದ ವಿನೇಶ್ ಫೋಗಟ್ ಕಾಂಗ್ರೆಸ್ ಸೇರ್ಪಡೆ

ಹರಿಯಾಣ ವಿಧಾನಸಭಾ ಚುನಾವಣೆಗೆ ಮುನ್ನ ಒಲಿಂಪಿಕ್ ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಶನಿವಾರ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ. ಪ್ಯಾರಿಸ್ ಒಲಿಂಪಿಕ್‌ನಲ್ಲಿ ಫೈನಲ್ ಪ್ರವೇಶಿಸಿ ಅಂತಿಮ‌ ಹಂತದಲ್ಲಿ ಅನರ್ಹಗೊಂಡಿದ್ದರು.

ಇಬ್ಬರು ಕುಸ್ತಿಪಟುಗಳು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ದೆಹಲಿಯ ನಿವಾಸಕ್ಕೆ ಆಗಮಿಸಿ ಬಳಿಕ ಪಕ್ಷವನ್ನು ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸೆ.4 ರಂದು ನವದೆಹಲಿಯಲ್ಲಿ ಇತ್ತೀಚೆಗೆ ಭೇಟಿಯಾದ ನಂತರ ಈ ಬೆಳವಣಿಗೆಯಾಗಿದೆ. ಅವರ ರಾಜಕೀಯ ಪ್ರವೇಶದ ಬಗ್ಗೆ ಊಹಾಪೋಹಗಳಿಗೆ ಕೊನೆಗೂ ತೆರೆಬಿದ್ದಿದೆ.

ಪಕ್ಷ ಸೇರ್ಪಡೆಗೂ ಮುನ್ನ ವಿನೇಶ್‌ ಫೋಗಟ್‌ ಭಾರತೀಯ ರೈಲ್ವೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಭಾರತೀಯ ರೈಲ್ವೆಗೆ ಸೇವೆ ಸಲ್ಲಿಸುವುದು ನನ್ನ ಜೀವನದ ಸ್ಮರಣೀಯ ಮತ್ತು ಹೆಮ್ಮೆಯ ಸಮಯ. ನನ್ನ ಜೀವನದ ಈ ಹಂತದಲ್ಲಿ ನಾನು ರೈಲ್ವೆ ಸೇವೆಯಿಂದ ಹೊರಬರಲು ನಿರ್ಧರಿಸಿದೆ. ನನ್ನ ರಾಜೀನಾಮೆಯನ್ನು ಭಾರತೀಯ ರೈಲ್ವೆಯ ಸಮರ್ಥ ಅಧಿಕಾರಿಗಳಿಗೆ ಸಲ್ಲಿಸಿದ್ದೇನೆ. ರಾಷ್ಟ್ರದ ಸೇವೆಯಲ್ಲಿ ರೈಲ್ವೆ ನನಗೆ ನೀಡಿದ ಈ ಅವಕಾಶಕ್ಕಾಗಿ ನಾನು ಭಾರತೀಯ ರೈಲ್ವೆ ಕುಟುಂಬಕ್ಕೆ ಯಾವಾಗಲೂ ಕೃತಜ್ಞಳಾಗಿದ್ದೇನೆ ಎಂದು ಎಕ್ಸ್‌ನಲ್ಲಿ ಫೋಗಟ್‌ ಪೋಸ್ಟ್‌ ಹಾಕಿದ್ದರು.

Related Articles

Latest Articles