Monday, December 9, 2024

ದಕ್ಷಿಣ ಕನ್ನಡ: ಆಟೋ ರಿಕ್ಷಾ – ದ್ವಿಚಕ್ರ ವಾಹನ ಅಪಘಾತ; ಓರ್ವ ಮೃತ್ಯು

ಬಂಟ್ವಾಳ: ಆಟೋ ರಿಕ್ಷಾ ಹಾಗೂ ದ್ವಿಚಕ್ರ ವಾಹನದ ಮಧ್ಯೆ ನಡೆದ ಅಪಘಾತದಲ್ಲಿ ರಿಕ್ಷಾದಲ್ಲಿದ್ದ ಪ್ರಯಾಣಿಕ ಮೃತಪಟ್ಟ ಘಟನೆ ವಿಟ್ಲ ಸಮೀಪದ ಪೆರುವಾಯಿಯ ಬೆರಿಪದವು ಎಂಬಲ್ಲಿ ಅ 23 ರಂದು ನಡೆದಿದೆ. ಬಾಯಾರು ಪೆರುವೋಡಿ ನಿವಾಸಿ ನಾಗೇಶ್ ಮೃತಪಟ್ಟವರು.

ಇನ್ನೊಂದು ವಾಹನವನ್ನು ಓವರ್ ಟೇಕ್ ಮಾಡುವ ಭರದಲ್ಲಿ ಪೆರುವಾಯಿ-ಬೆರಿಪದವು ರಸ್ತೆಯಲ್ಲಿ ಸ್ಕೂಟಿ ಮತ್ತು ಆಟೋರಿಕ್ಷಾ ಮುಖಾಮುಖಿ ಡಿಕ್ಕಿ ಹೊಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ರಿಕ್ಷಾದಲ್ಲಿ ಮೂವರು ಪ್ರಯಾಣಿಸುತ್ತಿದ್ದು ಓರ್ವ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಉಳಿದಿಬ್ಬರು ಹಾಗು ಸ್ಕೂಟಿ ಸವಾರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Latest Articles