ಬಂಟ್ವಾಳ: ಯುವಕನೋರ್ವ ಆಟೋ ಚಾಲಕನಿಗೆ ಚೂರಿ ಇರಿದ ಘಟನೆ ಆ. ೧೮ರ ಭಾನುವಾರ ನಡೆದಿದೆ. ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಉರಿಮಜಲು ಜಂಕ್ಷನ್‌ನಲ್ಲಿ ಓರ್ವ ವ್ಯಕ್ತಿಗೆ ಎಲ್ಲರ ಕಣ್ಣಮುಂದೆಯೇ ಆರೋಪಿ ಚೂರಿ ಇರಿದಿದ್ದಾನೆ.
ಸದ್ಯ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಕಾರ್ಯಾಡಿ ನಿವಾಸಿ ಆಫೀಲ್ ಚೂರಿ ಇರಿದ ವ್ಯಕ್ತಿ. ಎಂಎಂಎಸ್ ಆಟೋ ಚಾಲಕ ಶರೀಫ್ ಚೂರಿ ಇರಿತಕ್ಕೆ ಒಳಗಾದವರು. ಇಡ್ಕಿದು ಗ್ರಾಮ ಪಂಚಾಯತ್‌ನ ಎದುರಲ್ಲಿ ಈ ಘಟನೆ ಸಂಭವಿಸಿದೆ.
ಗಂಭೀರ ಗಾಯಗೊಂಡ ಶರೀಫ್‌ನನ್ನು ಸ್ಥಳೀಯರು ಪುತ್ತೂರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದಾರೆ. ಸದ್ಯ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
ಸಾರ್ವಜನಿಕರ ಆರೋಪಗಳೇನು?
ಉರಿಮಜಲು ಮತ್ತು ಕಾರ್ಯಾಡಿ ಎಂಬಲ್ಲಿ ಗಾಂಜಾ ವ್ಯಸನಿಗಳ ಕಾಟ ಹೆಚ್ಚಾಗುತ್ತಿದೆ. ಇಂತಹ ಅಪರಾಧಿ ಚಟುವಟಿಕೆಗಳು ಹೆಚ್ಚಲು ಗಾಂಜಾ ಸೇವನೆಯೇ ಕಾರಣ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಪೊಲೀಸ್ ಇಲಾಖೆ ಇದನ್ನು ಗಂಭೀರವಾಗಿ ಪರಿಗಣಿಸಿ ಗಾಂಜಾ ವ್ಯಸನಿಗಳನ್ನು ಮಟ್ಟ ಹಾಕಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.