Monday, December 9, 2024

ಬೆಂಗಳೂರು: ನೀರಿನ ದರ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಸಿದ್ಧತೆ

ಬೆಂಗಳೂರಿನ ಜನತೆಗೆ ರಾಜ್ಯ ಸರ್ಕಾರವು ಮತ್ತೊಂದು ಶಾಕ್‌ ನೀಡಿದ್ದು, ನೀರಿನ ದರ ಪರಿಷ್ಕರಣೆಗೆ ಸಿದ್ಧತೆ ನಡೆಸಲಾಗಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಬೈರತಿ ಸುರೇಶ್‌, ಬೆಂಗಳೂರು ನಗರದಲ್ಲಿ ಕಳೆದ 10-12ವರ್ಷಗಳಿಂದ ನೀರಿನ ದರ ಪರಿಷ್ಕರಣೆ ಮಾಡಿಲ್ಲ.

ಹೀಗಾಗಿ ಸ್ವಲ್ಪ ಮಟ್ಟಿಗೆ ನೀರಿನ ಶುಲ್ಕ ಹೆಚ್ಚಳ ಮಾಡುತ್ತಿದ್ದೇವೆ. ಇದರಿಂದ ಜನರಿಗೆ ಸ್ವಲ್ಪ ಹೊರೆಯಾಗಲಿದೆ ಎಂದು ಹೇಳಿದ್ದಾರೆ.

ಕಾಲಕಾಲಕ್ಕೆ ಬೆಲೆಗಳು ಪರಿಷ್ಕರಣೆ ಆಗುವುದು ಸಹಜ, ಆದರೆ ನೀರಿನ ದರದ ವಿಚಾರದಲ್ಲಿ ಆಗಿಲ್ಲ. ಹೀಗಾಗಿ ನೀರಿನ ದರ ಪರಿಷ್ಕರಣೆ ಮಾಡುತ್ತಿದ್ದು, ಸ್ವಲ್ಪ ಮಟ್ಟಿಗೆ ಜನರಿಗೆ ಹೊರೆಯಾಗಬಹುದು. ಹಲವು ಬಾರಿ ವಿದ್ಯುತ್‌ ಶುಲ್ಕ ಹೆಚ್ಚಳವಾಗಿದೆ. ನೀರಿನ ಪೂರೈಕೆ ವೆಚ್ಚ ಹೆಚ್ಚಾಗಿದೆ. ಹೀಗಾಗಿ ಅನಿವಾರ್ಯವಾಗಿ ಅಲ್ಪ ಪ್ರಮಾಣದಲ್ಲಿ ದರ ಹೆಚ್ಚಳ ಮಾಡಬೇಕಾಗಿದೆ ಎಂದು ತಿಳಿಸಿದ್ದಾರೆ.

Related Articles

Latest Articles