ಕಾಸರಗೋಡು: ರಾತ್ರಿ ವೇಳೆ ನಾಪತ್ತೆಯಾಗಿದ್ದ ವಿವಾಹಿತ ಮಹಿಳೆಯೊಬ್ಬರು ಬಾವಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ವರದಿಯಾಗಿದೆ. ಕೂಡ್ಲು ಬಟ್ಟಂಪರ ನಿವಾಸಿ ಎಸ್ ಶಿವ ಅವರ ಪತ್ನಿ ಶರ್ಮಿಳಾ ಮೃತಪಟ್ಟವರು.
ಆ.೧೯ರ ಸೋಮವಾರ ರಾತ್ರಿ ೧೧ ಗಂಟೆಗೆ ಮಲಗಲು ಹೋದ ಶರ್ಮಿಳಾ ನಂತರ ನಾಪತ್ತೆಯಾಗಿದ್ದರು. ಬಳಿಕ ಹುಡುಕಾಟ ನಡೆಸಿದಾಗ ಬೆಳಗ್ಗೆ ಮನೆ ಸಮೀಪದ ಬಾವಿಯಲ್ಲಿ ಪತ್ತೆಯಾಗಿದ್ದಾರೆ. ಕೂಡಲೇ ಆಸ್ಪತ್ರೆಗೆ ಸಾಗಿಸಲಾಗಿದೆ. ಆಸ್ಪತ್ರೆಯಲ್ಲಿ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಗೆ ರವಾನಿಸಲಾಗಿದೆ.
ಮೃತ ಶರ್ಮಿಳಾ ತನ್ನ ಪತಿಯೊಂದಿಗೆ ಕಾಸರಗೋಡಿನ ಸಂಸ್ಥೆಯೊಂದರಲ್ಲಿ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದರು. ಇಬ್ಬರು ಮಕ್ಕಳು ತಾಯಿಯನ್ನು ಕಳೆದುಕೊಂಡು ದುಃಖದಲ್ಲಿದ್ದಾರೆ.