Thursday, November 14, 2024

ಫ್ಲೈಓವರ್‌ನಿಂದ ಕೆಳಗೆ ಬಿದ್ದ ದ್ವಿಚಕ್ರ ಸವಾರೆ ಮೃತ್ಯು

ತಿರುವನಂತಪುರ: ರಾಷ್ಟ್ರೀಯ ಹೆದ್ದಾರಿಯ ವೆಂಪಾಲವಟ್ಟದಲ್ಲಿ ಯುವತಿಯೊಬ್ಬಳು ತನ್ನ ಸ್ಕೂಟರ್‌ನೊಂದಿಗೆ ಫ್ಲೈಓವರ್‌ನಿಂದ ಸರ್ವಿಸ್ ರಸ್ತೆಗೆ ಬಿದ್ದು ದಾರುಣ ಅಂತ್ಯ ಕಂಡಿದ್ದಾರೆ.

ಕೋವಲಂ ವೆಲ್ಲರ್ ಮೂಲದ ಸಿಮಿ (35) ಮೃತರು. ಸಿಮಿ ಅವರ ಪುತ್ರಿ ಶಿವನ್ಯಾ (ಮೂರು) ಮತ್ತು ಸಹೋದರಿ ಸಿನಿ (32) ಗಾಯಗೊಂಡಿದ್ದಾರೆ.

ಸೋಮವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಈ ವೇಳೆ ಮೂವರು ಪ್ರಯಾಣಿಸುತ್ತಿದ್ದ ಸ್ಕೂಟರ್ ಸೇತುವೆಯಿಂದ ಕೆಳಗೆ ಬಿದ್ದಿದೆ. ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ ಎಂಬುದು ಪ್ರಾಥಮಿಕ ವರದಿ.

ಗಾಯಾಳುಗಳನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಆದರೆ ಗಂಭೀರವಾಗಿ ಗಾಯಗೊಂಡಿದ್ದ ಸಿಮಿಯನ್ನು ರಕ್ಷಿಸಲು ಸಾಧ್ಯವಾಗಲಿಲ್ಲ ಎಂದು ಸುದ್ದಿ ಮೂಲಗಳು ತಿಳಿಸಿದೆ.

Related Articles

Latest Articles