ಯಾದಗಿರಿ: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಯಲ್ಲಿ ನಕಲು ಮಾಡಲು ಸಹಕರಿಸಿದ ಆರೋಪದ ಮೇಲೆ ಇಬ್ಬರು ಶಿಕ್ಷಕರ ಅಮಾನತು ಮಾಡಲಾಗಿದೆ. ಜಿಲ್ಲೆಯ ಹುಣಸಗಿ ಪರೀಕ್ಷಾ ಕೇಂದ್ರದ ಮೇಲ್ವಿಚಾರಕರಾಗಿದ್ದ ಸುರಪುರ ತಾಲೂಕಿನ ಏವೂರು ಸರ್ಕಾರಿ ಶಾಲೆಯ ಶಿಕ್ಷಕ ಸಾಹೇಬ್ಗೌಡ ಮತ್ತು ಸುರಪುರ ಪರೀಕ್ಷಾ ಕೇಂದ್ರದ ಮೇಲ್ವಿಚಾರಕರಾಗಿದ್ದ ಸುರಪುರ ತಾಲೂಕಿನ ಝಂಡದಕೇರ ಗ್ರಾಮದ ಸರ್ಕಾರಿ ಶಾಲೆಯ ಶಿಕ್ಷಕ ಹನುಮಂತರಾಯ ಅಮಾನತು ಮಾಡಲಾಗಿದೆ.
ಯಾದಗಿರಿ ಜಿ.ಪಂ. ಸಿಇಒ ಗರೀಮಾ ಪನ್ವಾರ್ ಅಮಾನತು ಆದೇಶ ಹೊರಡಿಸಿದ್ದಾರೆ. ವಿದ್ಯಾರ್ಥಿಗಳು ನಕಲು ಮಾಡುತ್ತಿದ್ದರೂ ಮೇಲ್ವಿಚಾರಕರು ಕ್ರಮಕೈಗೊಂಡಿರಲಿಲ್ಲ.
ಮುಖ್ಯ ಅಧೀಕ್ಷಕರ ಗಮನಕ್ಕೂ ತರದೆ ಪರೀಕ್ಷಾ ಮೇಲ್ವಿಚಾರಕರು ನಿರ್ಲಕ್ಷಿಸಿದ್ದಾರೆ. ಸಿಸಿಕ್ಯಾಮರಾ ದೃಶ್ಯ ಆಧರಿಸಿ ಇಬ್ಬರು ಪರೀಕ್ಷಾ ಮೇಲ್ವಿಚಾರಕರ ಅಮಾನತು ಮಾಡಲಾಗಿದೆ.