ತೀರ್ಥಹಳ್ಳಿ ತಾಲೂಕಿನ ಅತ್ತಿಸರ ಗ್ರಾಮದಲ್ಲಿ ಕಳೆದ ಗುರುವಾರ ಕೆಎಫ್‌ಡಿ (ಕ್ಯಾಸನೂರು ಫಾರೆಸ್ಟ್ ಡಿಸೀಸ್) ಅಥವಾ ಮಂಗನ ಖಾಯಿಲೆ ಮೊದಲ ಪ್ರಕರಣ ಪತ್ತೆಯಾಗಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ ರಾಜೇಶ್ ಸುರಗಿಹಳ್ಳಿ ಅವರು ಇದನ್ನು ದೃಢಪಡಿಸಿದ್ದಾರೆ.
ಜಲ್ಲೆಯ ತೀರ್ಥಹಳ್ಳಿ ತಾಲೂಕಿನ ಶೇಡ್ಗಾರ್ ಬಳಿಯ ಅತ್ತಿಸರ ಗ್ರಾಮದ 53 ವರ್ಷದ ಮಹಿಳೆಯ RTPCR ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿದೆ. ಪಾಸಿಟಿವ್ ಕಾಣಿಸಿಕೊಂಡಿರುವ ಮಹಿಳೆಯ ಆರೋಗ್ಯ ಸ್ಥಿರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅತ್ತಿಸರ ಗ್ರಾಮವು ಕಾಡಂಚಿನ ಗ್ರಾಮವಾಗಿದ್ದು ಈ ಹಿಂದೆಯು ಈ ಭಾಗದಲ್ಲಿ ಕೆಎಫ್‌ಡಿ ಪ್ರಕರಣಗಳು ಪತ್ತೆಯಾಗಿವೆ.
ಈ ಮಂಗನ ಕಾಯಿಲೆಗೆ ಇದುವರೆಗೆ ಯಾವುದೇ ಲಸಿಕೆ ಪತ್ತೆ ಹಚ್ಚಿಲ್ಲ. ಕೇವಲ ಬೂಸ್ಟರ್ ಡೋಸ್ ಹಾಗೂ ಮುನ್ನೆಚ್ಚರಿಕೆ ಕ್ರಮಗಳೇ ಇದಕ್ಕೆ ಸೂಕ್ತ ಮದ್ದು. ಈ ಕಾಯಿಲೆ ಪತ್ತೆಯಾಗಿ 6-7 ದಶಕಗಳೇ ಸಮೀಸುತ್ತಿದ್ದರೂ ಇದುವರೆಗೂ ಯಾವುದೇ ಸರ್ಕಾರಗಳು ಆಗಲಿ, ವಿಜ್ಞಾನಿಗಳಾಗಲಿ ಇದಕ್ಕೆ ಲಸಿಕೆ ಕಂಡುಹಿಡಿಯಲಿಲ್ಲ.
ಈ ರೋಗ ಸಾಮಾನ್ಯವಾಗಿ ಜನವರಿಯಿಂದ ಜೂನ್‍ವರೆಗೆ ಮಾತ್ರ ಕಾಣಿಸಿಕೊಳ್ಳುತ್ತದೆ. ಈ ಅವಧಿಯಲ್ಲಿ ಸ್ವಲ್ಪ ಮುನ್ನೆಚ್ಚರಿಕೆ ವಹಿಸಿದರೆ ಬಚಾವ್ ಆಗಬಹುದು ಎಂದು ಹೇಳುತ್ತಾರೆ ಆರೋಗ್ಯ ಇಲಾಖೆಯ ಅಧಿಕಾರಿಗಳು.